Get Even More Visitors To Your Blog, Upgrade To A Business Listing >>

ಬಿಜೆಪಿ ಸರಕಾರ ರಚನೆಗೆ ಗೋವಾ ರಾಜ್ಯಪಾಲರ ಕರೆ, ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ ಕಾಂಗ್ರೆಸ್‌ನ ಕಾವ್ಳೇಕರ್

download-1

ಗೋವಾ ರಾಜ್ಯಪಾಲರಾದ ಮೃದುಲಾ ಸಿನ್ಹಾ ಅವರು ಮನೋಹರ್ ಪರಿಕ್ಕರ್ ಅವರಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ನ ಮೊರೆ ಹೋಗಿದೆ.
ಇತ್ತೀಚೆಗೆ ನಡೆದಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಎರಡನೇ ಸ್ಥಾನ ಗಳಿಸಿದ್ದರೂ, ರಾಜ್ಯಪಾಲರು ಅದಕ್ಕೆ ಸರ್ಕಾರ ರಚಿಸಲು ಆಹ್ವಾನ ನೀಡಿದ್ದಾರೆ ಎಂದು ಅದು ಆರೋಪಿಸಿದೆ. ಗೋವಾ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಚಂದ್ರಕಾಂತ್ ಕಾವ್ಳೇಕರ್ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಪಕ್ಷಕ್ಕೆ ಸರ್ಕಾರ ರಚನೆಗೆ ಆಹ್ವಾನ ನೀಡುವುದು ರಾಜ್ಯಪಾಲರ ಕರ್ತವ್ಯವಾಗಿತ್ತು ಎಂದು ಅವರು ಅರ್ಜಿಯಲ್ಲಿ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ನ ವಿಶೇಷ ನ್ಯಾಯಪೀಠದ ಮುಂದೆ ಮಂಗಳವಾರ ಬೆಳಿಗ್ಗೆ ಅರ್ಜಿ ವಿಚಾರಣೆಗೆ ಬರುವ ನಿರೀಕ್ಷೆ ಇದೆ. ರಕ್ಷಣಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮನೋಹರ್ ಪರಿಕ್ಕರ್ ಅವರು ಸಂಜೆ ಗೋವಾದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಾವ್ಳೇಕರ್ ಪರವಾಗಿ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಮನು ಸಿಂಘ್ವಿ ಅವರು ವಾದ ಮಂಡಿಸಲಿದ್ದಾರೆ.



This post first appeared on V4news, please read the originial post: here

Share the post

ಬಿಜೆಪಿ ಸರಕಾರ ರಚನೆಗೆ ಗೋವಾ ರಾಜ್ಯಪಾಲರ ಕರೆ, ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ ಕಾಂಗ್ರೆಸ್‌ನ ಕಾವ್ಳೇಕರ್

×

Subscribe to V4news

Get updates delivered right to your inbox!

Thank you for your subscription

×