Get Even More Visitors To Your Blog, Upgrade To A Business Listing >>

ಮಾರಡ್ಕ ಬಳಿ ರಸ್ತೆಗೆ ಕಾಂಕ್ರೀಟ್, ಶಿಲಾನ್ಯಾಸ ನೆರವೇರಿಸಿದ ಶಾಸಕ ಅಭಯಚಂದ್ರ ಜೈನ್

Tags: agravesup

concrete

ಕಿನ್ನಿಗೋಳಿ ಸಮೀಪದ ಮಾರಡ್ಕ ಮತ್ತು ನೇಕಾರ ಕಾಲನಿ ಬಳಿ ಗಡಿನಾಡು ಅಭಿವೃದ್ದಿ ಯೋಜನೆ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ೫ ಲಕ್ಷ ವೆಚ್ಚದ ರಸ್ತೆ ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ ನೆರವೇರಿತು.
ಮುಲ್ಕಿ ಮೂಡಬಿದ್ರೆ ಕ್ಷೇತ್ರದ ಶಾಸಕ ಅಭಯಚಂದ್ರ ಜೈನ್ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಅವರು, ಗಡಿನಾಡು ಅಭಿವೃದ್ದಿ ಅನುದಾನದಲ್ಲಿ ನಮ್ಮ ಕ್ಷೇತ್ರಕ್ಕೆ ೨೫ ಲಕ್ಷ ರೂಪಾಯಿಯನ್ನು ಮಾನ್ಯ ಮುಖ್ಯಮಂತ್ರಿಯವರು ನೀಡಿದ್ದಾರೆ. ಕ್ಷೇತ್ರದ ಅಭಿವೃದ್ದಿಗೆ ಇನ್ನಷ್ಟು ಅನುದಾನ ನೀಡುವ ಭರವಸೆ ನೀಡಿದ್ದಾರೆ ಎಂದರು. ಈ ಸಂದರ್ಭ ಮೆನ್ನಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಸರೋಜಿನಿ ಗುಜರನ್, ಸದಸ್ಯರಾದ ಸುನಿಲ್ ಸಿಕ್ವೇರ, ಮಲ್ಲಿಕಾ, ಸುಶೀಲಾ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಶೈಲಾ ಸಿಕ್ವೇರ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಧನಂಜಯ ಮಟ್ಟು, ನಗರ ಪಂಚಾಯತ್ ಸದಸ್ಯ ಅಸೀಪ್ ಮತ್ತಿತರರು ಉಪಸ್ಥಿತರಿದ್ದರು.



This post first appeared on V4news, please read the originial post: here

Share the post

ಮಾರಡ್ಕ ಬಳಿ ರಸ್ತೆಗೆ ಕಾಂಕ್ರೀಟ್, ಶಿಲಾನ್ಯಾಸ ನೆರವೇರಿಸಿದ ಶಾಸಕ ಅಭಯಚಂದ್ರ ಜೈನ್

×

Subscribe to V4news

Get updates delivered right to your inbox!

Thank you for your subscription

×