Get Even More Visitors To Your Blog, Upgrade To A Business Listing >>

ಸುರತ್ಕಲ್‌ನಲ್ಲಿ ಕಾಂಗ್ರೆಸ್ ನಡಿಗೆ ಸುರಾಜ್ಯದ ಕಡೆಗೆ,  ಬಿಜೆಪಿ ವಿರುದ್ಧ ಕಾಂಗ್ರೆಸ್ ಮುಖಂಡರ ವಾಗ್ದಾಳಿ

congress

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್, ಗುರುಪುರ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ನಡಿಗೆ ಸುರಾಜ್ಯದ ಕಡೆಗೆ ಕಾರ್ಯಕ್ರಮವು ಸುರತ್ಕಲ್‌ನಲ್ಲಿ ನಡೆಯಿತು.
ಸುರತ್ಕಲ್‌ನ ಬಂಟರ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ್ ರೈ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ವಿಧಾನ ಪರಿಷತ್ ಸದಸ್ಯ ವಿ. ಎಸ್. ಉಗ್ರಪ್ಪ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿಗರು ದೇಶದಲ್ಲಿ ಕಾಂಗ್ರೆಸ್‌ನ್ನು ನಿರ್ನಾಮ ಮಾಡುವುದಾಗಿ ಹೇಳುತ್ತಿದ್ದಾರೆ. ಆದರೆ ಕಾಂಗ್ರೆಸನ್ನು ನಿರ್ನಾಮ ಮಾಡಲು ಸಾಧ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ದೇಶದ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನ ಸ್ವಾಭಿಮಾನವನ್ನು ಕೆಣಕಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕ ಮೊಯ್ದೀನ್ ಬಾವ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕ ವಿಜಯ್ ಕುಮಾರ್ ಶೆಟ್ಟಿ, ಕಾಂಗ್ರೆಸ್ ಅನಿವಾಸಿ ಭಾರತೀಯ ಘಟಕದ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ, ಕೆಪಿಸಿಸಿ ಮಹಿಳಾ ಸಮಿತಿಯ ಉಪಾಧ್ಯಕ್ಷೆ ಡಾ. ನಾಗಲಕ್ಷ್ಮಿ ಮತ್ತಿತರರು ಉಪಸ್ಥಿತರಿದ್ದರು.



This post first appeared on V4news, please read the originial post: here

Share the post

ಸುರತ್ಕಲ್‌ನಲ್ಲಿ ಕಾಂಗ್ರೆಸ್ ನಡಿಗೆ ಸುರಾಜ್ಯದ ಕಡೆಗೆ,  ಬಿಜೆಪಿ ವಿರುದ್ಧ ಕಾಂಗ್ರೆಸ್ ಮುಖಂಡರ ವಾಗ್ದಾಳಿ

×

Subscribe to V4news

Get updates delivered right to your inbox!

Thank you for your subscription

×