Get Even More Visitors To Your Blog, Upgrade To A Business Listing >>

ಕುಲಾಲ ಕುಂಬಾರರಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡಿ, ಹೆಂಗವಳ್ಳಿಯಲ್ಲಿ ಕರಾವಳಿ ಕುಲಾಲ ಯುವ ವೇದಿಕೆ ಒತ್ತಾಯ

1603side3-kulala-sangha

ಕುಂಬಾರ, ಮೂಲ್ಯ, ಹಾಂಡ, ಗುನುಗ ಹೀಗೆ ಬೇರೆ ಬೇರೆ ಹೆಸರುಗಳಿಂದ ಈ ನಾಡಿನ ಮೂಲೆ ಮೂಲೆಯಲ್ಲೂ ಸಾಕಷ್ಟು ಸಂಖ್ಯೆಯಲ್ಲಿರುವ ಕುಂಬಾರ ಸಮುದಾಯ ಇಂದು ಬಲಿಷ್ಠ ಸಂಘಟನೆಯಲ್ಲಿ ಒಗ್ಗೂಡುತ್ತಿವೆ. ಈ ಕುಂಬಾರ ಸಮುದಾಯಕ್ಕೆ ಮುಂಬರುವ ಚುನಾವಣೆಯಲ್ಲಿ ರಾಜಕೀಯ ಸ್ಥಾನಮಾನ ಕೊಡುವ ಕೆಲಸವನ್ನು ಎಲ್ಲ ರಾಜಕೀಯ ಪಕ್ಷಗಳು ಮಾಡಬೇಕು ಎಂದು ಕರಾವಳಿ ಕುಲಾಲ ಕುಂಬಾರರ ಯುವ ವೇದಿಕೆಯ ಸ್ಥಾಪಕಾಧ್ಯಕ್ಷ ಡಾ| ಅಣ್ಣಯ್ಯ ಕುಲಾಲ್ ಉಳೂರು ಅವರು ಹೇಳಿದರು.
ಅವರು ಕರಾವಳಿ ಕುಲಾಲ ಕುಂಬಾರರ ಯುವ ವೇದಿಕೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಕುಂಬಾರರ ಯುವ ವೇದಿಕೆ ಹೆಂಗವಳ್ಳಿ ಘಟಕದ ಉದ್ಘಾಟನಾ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡಿ ಅಭಿಮತ ವ್ಯಕ್ತಪಡಿಸಿದರು. ಕುಂಬಾರ ಸಮುದಾಯದ ಸಂಘಟನೆಗೆ ಕರಾವಳಿ ಕುಲಾಲ ಕುಂಬಾರ ಯುವ ವೇದಿಕೆ ರಾಜ್ಯಕ್ಕೆ ಮಾದರಿಯಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಮುಂಚೂಣಿಯಲ್ಲಿವೆ. ಕುಂದಾಪುರ, ಕಾರ್ಕಳ, ಕಾಪು, ಸುರತ್ಕಲ್, ಕುಳಾಯಿ, ಬೆಳ್ತಂಗಡಿ, ಬಂಟ್ವಾಳ ಹಾಗೂ ಉಳ್ಳಾಲ ವಿಧಾನ ಸಭಾ ಯುವ ಘಟಕಗಳು ಪೈಪೋಟಿಯ ರೀತಿಯಲ್ಲಿ ಕುಲಾಲ ಯುವಕರನ್ನು ಸಂಘಟಿಸುತ್ತಿವೆ. ಇದು ಎಲ್ಲ ಪಕ್ಷಗಳ ರಾಜಕರಣಿಗಳ ಗಮನಕ್ಕೆ ಬಂದಿದ್ದು, ಕುಂಬಾರ ಸಮುದಾಯಕ್ಕೆ ಮುಂದಿನ ಚುನಾವಣೆಗಳಲ್ಲಿ ಸಾಮಾಜಿಕ ನ್ಯಾಯ ಸಿಗುವ ಭರವಸೆ ಸಿಕ್ಕಿದೆ ಎಂದು ಹೇಳಿದರು.
ಕುಂದಾಪುರ ಕುಲಾಲ ಸಮಾಜ ಸುಧಾರಕ ಸಂಘದ ಅಧ್ಯಕ್ಷ ಹಾಗೂ ಕುಂದಾಪುರ ವೈದ್ಯ ಡಾ| ಎಂ. ವಿ. ಕುಲಾಲ್ ಅವರು ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿ, ಕುಲಾಲ ಯುವ ವೇದಿಕೆಗಳೊಂದಿಗೆ ಸಮಸ್ತ ಕುಲಾಲರು ಒಗ್ಗೂಡುತಿದ್ದು, ಸಮುದಾಯ ಸಂಘಟನೆಗಳು ಬಲಿಷ್ಟವಾಗುತ್ತಿವೆ. ಪ್ರತಿ ವಿಧಾನ ಸಭಾ ಕ್ಷೇತ್ರದಲ್ಲೂ ಹಲವು ಕುಲಾಲ ನಾಯಕರು ಇತ್ತೀಚಿನ ದಿನಗಳಲ್ಲಿ ರಾಜಕೀಯ ಕ್ಷೇತ್ರಗಳಲ್ಲಿಯೂ ಹೆಸರು ಗಳಿಸುತ್ತಿದ್ದಾರೆ. ಅವರಿಗೆ ಚುನಾವಣೆಗಳಲ್ಲಿ ಸ್ಪರ್ಧಿಸುವ ಅವಕಾಶವನ್ನು ರಾಜಕೀಯ ಪಕ್ಷಗಳು ನೀಡಬೇಕು ಎಂದು ಅಭಿಪ್ರಾಯ ವ್ಯಕ್ತ ಪಡಿಸಿದರು. ಕರಾವಳಿ ಕುಲಾಲ ಯುವ ವೇದಿಕೆ ಹೆಂಗವಳ್ಳಿ ಘಟಕದ ಅಧ್ಯಕ್ಷ ಗೋವಿಂದ ಕುಲಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಅಧ್ಯಕ್ಷ ನಿರಂಜನ ಅಸೋಡು, ಸತೀಶ್ ಕುಲಾಲ್ ನಡೂರು, ಹರೀಶ್ ಕುಲಾಲ್ ಕೆದೂರು, ಜಿ. ಪಂ. ಸದಸ್ಯೆ ಸುಪ್ರೀತಾ ಉದಯ್ಕುಲಾಲ್, ಪ್ರಭಾಕರ ಕುಲಾಲ್, ಮಡಾಮಕ್ಕಿ ಗ್ರಾ. ಪಂ. ಅಧ್ಯಕ್ಷ ರಾಜು ಕುಲಾಲ, ಭೋಜು ಕುಲಾಲ್, ಸಂತೋಷ್ ಕುಲಾಲ್ ಪಕ್ಕಾಲು, ಕೊರಗ ಕುಲಾಲ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.



This post first appeared on V4news, please read the originial post: here

Share the post

ಕುಲಾಲ ಕುಂಬಾರರಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡಿ, ಹೆಂಗವಳ್ಳಿಯಲ್ಲಿ ಕರಾವಳಿ ಕುಲಾಲ ಯುವ ವೇದಿಕೆ ಒತ್ತಾಯ

×

Subscribe to V4news

Get updates delivered right to your inbox!

Thank you for your subscription

×