Get Even More Visitors To Your Blog, Upgrade To A Business Listing >>

ಮರವಂತೆ ಬಳಿ ಕಾರುಗಳ ಮುಖಾಮುಖಿ ಡಿಕ್ಕಿ, ಒಬ್ಬರ ಸಾವು, ಮೂವರಿಗೆ ಗಂಭೀರ ಗಾಯ

acc

ಮರವಂತೆಯ ಅಪೂರ್ವ ಹೊಟೇಲ್ ಬಳಿ ಮಾರುತಿ ಆಲ್ಟೋ ಹಾಗೂ ಸ್ವಿಫ್ಟ್ ಕಾರುಗಳ ನಡುವೆ ಸಂಭವಿಸಿದ ಮುಖಾಮುಖೀ ಢಿಕ್ಕಿಯಲ್ಲಿ ಆಲ್ಟೋ ಕಾರಿನ ಚಾಲಕ ತಮಿಳುನಾಡು ಮೂಲದ ಪ್ರಸ್ತುತ ಬೆಂಗಳೂರಿನ ಎಂ. ಜಿ. ರಸ್ತೆಯ ನಿವಾಸಿ ಧನಪಾಂಡ್ಯನ್ ಮೃತಪಟ್ಟಿದ್ದು, ಓರ್ವ ಬಾಲಕ ಸಹಿತ ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳೂರಿನಿಂದ ಪಣಜಿಗೆ ತೆರಳುತ್ತಿದ್ದ ಕುಟುಂಬವಿದ್ದ ಸ್ವಿಫ್ಟ್ ಕಾರು ಹಾಗೂ ಮುರುಡೇಶರ ಯಾತ್ರೆ ಮುಗಿಸಿ ಧರ್ಮಸ್ಥಳದ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಕುಟುಂಬವಿದ್ದ ಆಲ್ಟೋ ಕಾರು ನಡುವೆ ಢಿಕ್ಕಿ ಸಂಭವಿಸಿತ್ತು. ಢಿಕ್ಕಿಯಾದ ರಭಸಕ್ಕೆ ಆಲ್ಟೋ ಕಾರು ನುಜ್ಜು ಗುಜ್ಜಾಗಿದ್ದು, ಅದೇ ಕಾರಿನಲ್ಲಿದ್ದ ೩೬ರ ಧನಪಾಂಡ್ಯನ್ ಅವರ ಪುತ್ರ ೪ರ ಕಮಲಿ, ೬೫ರ ತಂದೆ ಕಾಮಾಟಿ, ೫೫ರ ತಾಯಿ ಸರೋಜಾ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪುತ್ರ ೮ರ ನಿದರ್ಶನ ಹಾಗೂ ಪತ್ನಿ ವಾಸುಕಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ವಿಫ್ಟ್ ಕಾರಿನ ಚಾಲಕ ಸಚಿನ್, ಸುಜಾತಾ, ಕೃಷ್ಣಪ್ಪ, ಶಶಿರೇಖಾ ಅವರು ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಧಾವಿಸಿದ ಸ್ಥಳೀಯರು ಕಾರಿನೊಳಗೆ ಸಿಲುಕಿದವರನ್ನು ಹೊರತೆಗೆಯುವಲ್ಲಿ ನೆರವಾದರು. ಗಂಗೊಳ್ಳಿ ಠಾಣಾಧಿಕಾರಿ ಸುಬ್ಬಣ್ಣ ಸ್ಥಳಕ್ಕೆ ಧಾವಿಸಿ ಸಂಚಾರ ಸುಗಮಗೊಳಿಸುವುದರೊಂದಿಗೆ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



This post first appeared on V4news, please read the originial post: here

Share the post

ಮರವಂತೆ ಬಳಿ ಕಾರುಗಳ ಮುಖಾಮುಖಿ ಡಿಕ್ಕಿ, ಒಬ್ಬರ ಸಾವು, ಮೂವರಿಗೆ ಗಂಭೀರ ಗಾಯ

×

Subscribe to V4news

Get updates delivered right to your inbox!

Thank you for your subscription

×