Get Even More Visitors To Your Blog, Upgrade To A Business Listing >>

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜು : ಸ್ವಚ್ಛ ಸಪ್ತಾಹದ ಸಮಾರೋಪ ಸಮಾರಂಭ

ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರಣವ ವಿದ್ಯಾರ್ಥಿ ಸಂಘ ಆಯೋಜಿತ ಸ್ವಚ್ಛ ಸಪ್ತಾಹದ ಸಮಾರೋಪ ಸಮಾರಂಭ ಶುಕ್ರವಾರ ಸಂಜೆ ಕಾಲೇಜಿನಲ್ಲಿ ನಡೆಯಿತು.

ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಲ್ಲಮುಂಡ್ಕೂರು ಗ್ರಾಮಪಂಚಾಯಿತಿ ಅಭಿವೃದ್ದಿ ಅಧಿಕಾರಿ ಬಿ ಉಗ್ಗಪ್ಪ ಮೂಲ್ಯ ಪೈಪ್ ಕಾಂಪೋಸ್ಟ್ ಬಗ್ಗೆ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಇದಕ್ಕೂ ಮೊದಲು ನಡೆದ ಮಾಹಿತಿ ಕಾರ್ಯಗಾರದಲ್ಲಿ ಮಾತನಾಡಿದ ಅವರು ಪೈಪ್ ಕಾಂಪೋಸ್ಟ್ ಮೂಲಕ ವ್ಯರ್ಥವಾಗಿ ಹೋಗುವ ತ್ಯಾಜ್ಯವನ್ನು ಉತ್ತಮ ಸಾವಯವ ಗೊಬ್ಬರವಾಗಿ ಪರಿವರ್ತಿಸಲು ಸಾಧ್ಯವಿದೆ. ಕಸ ವಿಲೇವಾರಿಯೊಂದಿಗೆ ಗೊಬ್ಬರ ತಯಾರಿಸುವ ಈ ವಿಧಾನವನ್ನು ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಯಲ್ಲಿ ಅಳವಡಿಸಿಕೊಂಡರೆ ಉತ್ತಮ ಎಂದರು. ಅಂಗಡಿಗಳಿಂದ ಮನೆಗೆ ವಸ್ತುಗಳನ್ನು ಕೊಂಡೊಯ್ಯಲು ಪ್ಲಾಸ್ಟಿಕ್ ಚೀಲಗಳ ಬದಲು ಬಟ್ಟೆ ಚೀಲಗಳನ್ನು ಬಳಸಿಕೊಳ್ಳುವ ಪದ್ದತಿಯನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಪದವಿ ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿಗಳಾದ ಸ್ವರ್ಣಕೀರ್ತಿ ಸ್ವಾಗತಿಸಿ, ಜಯಲಕ್ಷ್ಮೀ ವಂದಿಸಿದರು. ಹರ್ಷಿತ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.

ವರದಿ: ಸಂದೀಪ್ ಸಾಲ್ಯಾನ್, ಬಂಟ್ವಾಳ

The post ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜು : ಸ್ವಚ್ಛ ಸಪ್ತಾಹದ ಸಮಾರೋಪ ಸಮಾರಂಭ appeared first on V4News.This post first appeared on V4news, please read the originial post: here

Share the post

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜು : ಸ್ವಚ್ಛ ಸಪ್ತಾಹದ ಸಮಾರೋಪ ಸಮಾರಂಭ

×

Subscribe to V4news

Get updates delivered right to your inbox!

Thank you for your subscription

×