Get Even More Visitors To Your Blog, Upgrade To A Business Listing >>

ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕೆಲಸಗಳಾಗಿವೆ. ಅಭಿವೃದ್ಧಿ ಕಾರ್ಯ ಮನದಲ್ಲಿಟ್ಟು ಕಾಂಗ್ರೆಸ್‌ನ ಅಭ್ಯರ್ಥಿಗಳನ್ನು ಬೆಂಬಲಿಸಿ. ಉಳ್ಳಾಲದಲ್ಲಿ ಸಚಿವ ಯು.ಟಿ. ಖಾದರ್ ಹೇಳಿಕೆ.

ಉಳ್ಳಾಲ: ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಶಾಸಕರ ಹಾಗೂ ಮುಖ್ಯಮಂತ್ರಿಗಳ ಬಹುತೇಕ ಅನುದಾನವನ್ನು ವಿನಿಯೋಗಿಸಿ ಮಂಗಳೂರು ನಗರದಂತೆ ನಗರೀಕರಣ ಮಾಡಲಾಗಿದೆ. ಅಭಿವೃದ್ಧಿ ಕಾರ್ಯಗಳನ್ನು ಜನ ಮನದಲ್ಲಿಟ್ಟುಕೊಂಡು ಕಾಂಗ್ರೆಸ್ ನ ಎಲ್ಲಾ ಅಭ್ಯರ್ಥಿಗಳನ್ನು ಬೆಂಬಲಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದರು. ತೊಕ್ಕೊಟ್ಟು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದರು. ರಸ್ತೆ ಕಾಂಕ್ರೀಟಿಕರಣ, ಕಡಲ್ಕೊರೆತ ತಡೆಗೆ ಯೋಜನೆ, ಮೀನುಗಾರಿಕಾ ಜಟ್ಟಿಯಂತಹ ಅಭಿವೃದ್ಧಿ ಪರ ಯೋಜನೆಗಳನ್ನು ಕ್ಷೇತ್ರದಲ್ಲಿ ನಡೆಸಲಾಗಿದೆ. ನಗರೋತ್ಥಾನ ಯೋಜನೆಯಡಿ 25ಕೋಟಿ ಅನುದಾನವನ್ನು ಮಂಜೂರುಗೊಳಿಸಲಾಗಿದ್ದು, ಕ್ಷೇತ್ರ ವ್ಯಾಪ್ತಿ ಕಾಂಕ್ರೀಟಿಕರಣದಿಂದ ಬಾಕಿಯಾಗಿರುವ ರಸ್ತೆಗಳ ಕಾಮಗಾರಿ ಮಳೆಗಾಲ ಮುಗಿದ ತಕ್ಷಣ ನಡೆಯಲಿದೆ. ಒಂಭತ್ತುಕೆರೆ ಸಮೀಪ ಪ್ರತ್ಯೇಕ ಟ್ಯಾಂಕ್ ನಿರ್ಮಿಸಿ ನೂತನ ಪೈಪ್ ಲೈನ್ ಅಳವಡಿಸಿ ನಗರಸಭೆ ವ್ಯಾಪ್ತಿಗೆ ೨೪ ಗಂಟೆಗಳ ಕಾಲ ಕುಡಿಯುವ ನೀರಿನ ಯೋಜನೆಯನ್ನು ರೂಪಿಸಲಾಗಿದೆ. ಸಮಯಕ್ಕೆ ಸರಿಯಾಗಿ ಲೈಸೆನ್ಸ್, ರೇಷನ್ ಕಾರ್ಡು ಕೊಡುವ ವ್ಯವಸ್ಥೆ ನಗರಸಭೆ ಆಡಳಿತದಿಂದ ನಡೆದಿದೆ ಎಂದು ಹೇಳಿದರು.ಈ ಸಂದರ್ಭ ಮಾಧ್ಯಮಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಸದಾಶಿವ ಉಳ್ಳಾಲ್, ಕೆಪಿಸಿಸಿ ಕಾರ್ಯದರ್ಶಿ ರಾಜಶೇಖರ್ ಕೋಟ್ಯಾನ್, ಮಂಗಳೂರು ಮಹಾನಗರಪಾಲಿಕೆ ಮೇಯರ್ ಭಾಸ್ಕರ್ ಮೊಯ್ಲಿ, ಮಾಜಿ ಮೇಯರ್ ಶಶಿಧರ್ ಹೆಗಡೆ ಮತ್ತಿತರರು ಉಪಸ್ಥಿತರಿದ್ದರು.



This post first appeared on V4news, please read the originial post: here

Share the post

ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕೆಲಸಗಳಾಗಿವೆ. ಅಭಿವೃದ್ಧಿ ಕಾರ್ಯ ಮನದಲ್ಲಿಟ್ಟು ಕಾಂಗ್ರೆಸ್‌ನ ಅಭ್ಯರ್ಥಿಗಳನ್ನು ಬೆಂಬಲಿಸಿ. ಉಳ್ಳಾಲದಲ್ಲಿ ಸಚಿವ ಯು.ಟಿ. ಖಾದರ್ ಹೇಳಿಕೆ.

×

Subscribe to V4news

Get updates delivered right to your inbox!

Thank you for your subscription

×