Get Even More Visitors To Your Blog, Upgrade To A Business Listing >>

79ನೇ ಅಖಿಲಭಾರತ ಅಂತರ್ ವಿವಿ ಅಥ್ಲೆಟಿಕ್ ಚಾಂಪಿಯನ್‌ಶಿಪ್

ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ 79ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಚಾಂಪಿಯನ್ ಶಿಪ್ ಮೂಡಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನವಂಬರ್ 24 ರಿಂದ 28 ರವರೆಗೆ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ ಎಂ ಮೋಹನ್ ಆಳ್ವ ಅವರು ತಿಳಿಸಿದರು.

ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿ, ಮಂಗಳೂರು ವಿಶ್ವವಿದ್ಯಾಲಯದ ಇತಿಹಾಸದಲ್ಲೇ ಪ್ರಥಮ ಬಾರಿಗೆ ನಡೆಯುತ್ತಿರುವ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್ ಇದಾಗಿದ್ದು, ದೇಶದಲ್ಲಿ 350ಕ್ಕೂ ಅಧಿಕ ವಿಶ್ವವಿದ್ಯಾನಿಲಯಗಳ ಸುಮಯ 4500 ಅಥ್ಲೀಟ್‌ಗಳು ಹಾಗೂ 2000 ಕ್ರೀಡಾಧಿಕಾರಿಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಕ್ರೀಡಾಕೂಟದ ಸ್ಪರ್ಧೆಗಳು ನವೆಂಬರ್ 24ರಂದು ಬೆಳಿಗ್ಗೆ 6.30ರಿಂದಲೇ ಆರಂಭವಾಗಲಿದ್ದು ಅಂದು ಸಂಜೆ ಕ್ರೀಡಾಕೂಟದ ಉದ್ಘಾಟನೆ ನಡೆಯಲಿದೆ. ಮಧ್ಯಾಹ್ನ 3.30ಕ್ಕೆ ಮೂಡುಬಿದರೆಯ ಹನುಮಾನ್ ದೇವಸ್ಥಾನದಿಂದ ಭವ್ಯ ಮೆರವಣಿಗೆ ನಡೆಯಲಿದೆ. ಕ್ರೀಡಾಕೂಟದ ಉದ್ಘಾಟನೆಯನ್ನು ಡಿಸಿಎಂ ಡಾ.ಜಿ. ಪರಮೇಶ್ವರ್ ಉದ್ಘಾಟಿಸಲಿರುವರು.

ಸಮಾರೋಪ ಸಮಾರಂಭವು ನವೆಂಬರ್ 28ರಂದು ಮಧ್ಯಾಹ್ನ 3 ಗಂಟೆಗೆ ಸ್ವರಾಜ್ಯ ಮೈದಾನದಲ್ಲಿ ಜರುಗಲಿದ್ದು, ಸಚಿವ ಯು.ಟಿ. ಖಾದರ್ ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಿದ್ದಾರೆ. ಇನ್ನೂ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಗಮಿಸುವ ಎಲ್ಲಾ ಸ್ಪರ್ಧಿಗಳು, ತರಬೇತುದಾರರು ಕ್ರೀಡಾಧಿಕಾರಿಗಳು ಹಾಗೂ ವಿಶೇಷ ಆಹ್ವಾನಿತರಿಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಉಚಿತ ಊಟ ಹಾಗೂ ವಸತಿ ಸೌಲಭ್ಯವನ್ನು ಒದಗಿಸಲಾಗುವುದು. ಇದರ ಜೊತೆಗೆ ಕ್ರೀಡಾಕೂಟಕ್ಕೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಸಂಸ್ಥೆ ನೀಡುತ್ತಿದೆ.

ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿದ ಆಳ್ವಾಸ್ ಸಂಸ್ಥೆಯ ಮೂವರು ವಿದ್ಯಾರ್ಥಿಗಳನ್ನು ಉದ್ಘಾಟನಾ ಸಮಾರಂಭದಲ್ಲಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದರು.

ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಅಭಯಚಂದ್ರ ಜೈನ್, ಡಾ. ಪಿ. ಈಶ್ವರ್, ಡಾ. ಕಿಶೋರ್ ಕುಮಾರ್ ಸಿ.ಕೆ ಮತ್ತಿತರರು ಉಪಸ್ಥಿತರಿದ್ದರು.This post first appeared on V4news, please read the originial post: here

Share the post

79ನೇ ಅಖಿಲಭಾರತ ಅಂತರ್ ವಿವಿ ಅಥ್ಲೆಟಿಕ್ ಚಾಂಪಿಯನ್‌ಶಿಪ್

×

Subscribe to V4news

Get updates delivered right to your inbox!

Thank you for your subscription

×