Get Even More Visitors To Your Blog, Upgrade To A Business Listing >>

ಬಂಟ್ವಾಳ ತಾ.ಪಂ. ಸಭೆಯಲ್ಲಿ ಗದ್ದಲ : ಗ್ಯಾಸ್ ವಿತರಿಸುವ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳ ಕಡೆಗಣನೆ ಸದಸ್ಯರ ನಡುವೆ ಮಾತಿನ ಚಕಮಕಿ

Tags: agravesup

ಬಂಟ್ವಾಳ: ಕೇಂದ್ರ ಸರಕಾರದ ಉಜ್ವಲ ಯೋಜನೆಯಡಿ ಗ್ಯಾಸ್ ವಿತರಿಸುವ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳನ್ನು ಕಡೆಗಣಿಸಲಾಗುತ್ತಿದೆ ಎನ್ನುವ ಆರೋಪ ಬಂಟ್ವಾಳ ತಾಲೂಕು ಪಂಚಾಯತ್‌ನ ಸಾಮಾನ್ಯ ಸಭೆಯಲ್ಲಿ ಕೇಳಿ ಬಂದಿದೆ. ಈ ಬಗ್ಗೆ ಕೆಲ ಹೊತ್ತುಗಳ ಕಾಲ ಆಡಳಿತ ಹಾಗೂ ವಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು ಸಭಯೆಲ್ಲಿ ಗದ್ದಲ ಉಂಟಾಯಿತು.

ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರಾ ಅಧ್ಯಕ್ಷತೆಯಲ್ಲಿ ನಡೆದ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ ಮಾಧವ ಮಾವೆ ವಿಷಯ ಪ್ರಸ್ತಾಪಿಸಿ ಕೇಂದ್ರ ಸರಕಾರದ ಉಜ್ವಲ ಯೋಜನೆಯಡಿ ಗ್ಯಾಸ್ ವಿತರಿಸುವ ಕಾರ್ಯಕ್ರಮ ಯಾವ ಇಲಾಖೆಗೆ ಸಂಬಂದಫಟ್ಟದ್ದು ಎಂದು ಪ್ರಶ್ನಿಸಿದರು. ಗ್ಯಾಸ್ ವಿತರಿಸುವ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳನ್ನು ಕಡೆಗಣಿಸಲಾಗುತ್ತಿದೆ. ತನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಪಂಚಾಯತ್‌ನ ಸದಸ್ಯರೊಬ್ಬರ ಮನೆಯಲ್ಲಿ ಭಾನುವಾರದ ದಿನ ಕಾರ್ಯಕ್ರಮ ನಡೆಸಿರುವುದುವುದು ಸರಿಯೇ ಎಂದು ಅವರು ಪ್ರಶ್ನಿಸಿದರು.

ವಿಪಕ್ಷ ಸದಸ್ಯ ಪ್ರಭಾಕರ ಪ್ರಭು ಮಾತನಾಡಿ ಪ್ರತೀ ಗ್ರಾಮದ ಬಿಪಿಎಲ್ ಪಡಿತಚೀಟಿದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉಜ್ವಲ ಯೋಜನೆಯಡಿ ಎಲ್‌ಪಿಜಿ ಗ್ಯಾಸ್ ವಿತರಿಸಲಾಗುತ್ತಿದೆ. ಬಡವರು ಸಂಬಂಧಪಟ್ಟ ದಾಖಲೆಗಳೊಂದಿಗೆ ಗ್ಯಾಸ್ ಏಜೆನ್ಸಿಗೆ ಅರ್ಜಿ ಸಲ್ಲಿಸಿದರೆ ತಕ್ಷಣವೇ ಗ್ಯಾಸ್ ಸೌಲಭ್ಯ ಒದಗಿಸಲಾಗುತ್ತದೆ, ಇದು ಎಲ್ಲಾ ಜಪ್ರತಿನಿಧಿಗಳಿಗೂ ಗೊತ್ತಿದೆ. ಗೊತ್ತಿದ್ದು ಮತ್ತೆ ಸಭೆಯಲ್ಲಿ ಚರ್ಚಿಸುವುದು ಸರಿಯಲ್ಲ ಎಂದರು. ಗ್ಯಾಸ್ ವಿತರಿಸುವ ಜವಬ್ದಾರಿ ಸ್ಥಳೀಯ ಪಂಚಾಯತ್‌ಗೆ ಇದ್ದರೂ ಪಂಚಾಯತ್ ಸದಸ್ಯರ ಮನೆಯಲ್ಲಿ, ಅಂಗಡಿ ಬಾಗಿಲುಗಳಲ್ಲಿ ಗ್ಯಾಸ ವಿತರಿಸುವುದು ಸರಿಯೇ? ಎಂದು ಪ್ರಶ್ನಿಸಿದ ಮಂಜುಳ ಮಾವೆ ಸರಿ ಎಂದಾದಲ್ಲಿ ಎಲ್ಲಿ ಬೇಕಾದರೂ ಮಾಡಬಹುದು ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಿ ಎಂದು ಒತ್ತಾಐಇಸಿದರು. ಈ ಬಗ್ಗೆ ಜಿಲ್ಲಾ ಪಂಚಾಯತ್ ಸದಸ್ಯರು ತಾಲೂಕು ಪಂಚಾಯತ್ ಸಭೆಯಲ್ಲಿ ನಿರ್ಣಯ ಕೈಗೊಳ್ಳಲು ಸಾಧ್ಯವಿಲ್ಲ, ಈ ಅಧಿಕಾರ ತಾಲೂಕು ಪಂಚಾಯತ್ ಸದಸ್ಯರಿಗೆ ಮಾತ್ರ ಇರುವಂತದ್ದು ಎಂದು ವಿಕ್ಷ ಸದಸ್ಯ ಪ್ರಭಾಕರ ಪ್ರಭು ತೀಕ್ಷಣವಾಗಿ ಪ್ರತಿಕ್ರಿಯಿಸಿದರು.

ಅಧಿಕಾರಿಗಳಿಗೆ ಈ ಬಗ್ಗೆ ಸರಿಯಾದ ಮಾಹಿತಿ ಇಲ್ಲ ಎಂದು ಸದಸ್ಯರು ಆರೋಪಿಸಿದರು. ತಹಶೀಲ್ದರ್ ರಶ್ಮಿ ಅವರು ಪ್ರತಿಕ್ರಿಯಿಸಿ ಈ ಬಗ್ಗೆ ಸರಿಯಾದ ಮಾಹಿತಿ ಪಡೆದು ಸಭೆಗೆ ನೀಡುವುದಾಗಿ ತಿಳಿಸಿದರು. ಸದಸ್ಯ ಹೈದರ್ ಕೈರಂಗಳ ಮಾತನಾಡಿ ಸಭೆಯ ಘನತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಎಲ್ಲಾ ಸದಸ್ಯರು ಮಾತನಾಡ ಬೇಕು. ಜಿಲ್ಲಾ ಪಂಚಾಯತ್ ಸದಸ್ಯರು ಚುನಾಯಿತ ಪ್ರತಿನಿಧಿಯಾಗಿರುವುದರಿಂದ ಅವರಿಗೂ ಈ ಸಭೆಯಲ್ಲಿ ಗೌರವ ನೀಡಬೇಕು ಎಂದು ಚರ್ಚೆಗೆ ತೆರೆ ಎಳೆದರು.

ಮಾರ್ಚ್ ತಿಂಗಳಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಆ ಬಳಿಕ ಪಿಯೂಸಿ ಪರೀಕ್ಷೆ ಆರಂಭವಾಗುವುದರಿಂದ ಕ್ರಿಕೆಟ್, ಕಬಡ್ಡಿ ಟೂರ್ನಮೆಂಟ್‌ಗಳಿಗೆ ಅವಕಾಶ ಕೊಡಬಾರದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಮನವಿ ಮಾಡಿಕೊಂಡರು. ಸಜೀಪಮೂಡ ಗ್ರಾಮದ ಕೊಲ್ಯ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ಜಮೀನು ಮೀಸಲಿಟ್ಟಿದ್ದರೂ ಒಂದೂವರೆ ವರ್ಷದಿಂದ ಕಾಮಗಾರಿ ಆರಂಭವಾಗದಿರುವುದು ಯಾಕೆ ಎಂದು ಸದಸ್ಯ ಸಂಜೀವ ಪೂಜಾರಿ ಪ್ರಶ್ನಿಸಿದರು. ಬೆಂಜನಪದವು ಪ್ರಾಥಮಿಕ ಆರೋಗ್ಯ ಕೆಂದ್ರದ ಸಿಬ್ಬಂದಿಯ ಕರ್ತವ್ಯ ಲೋಪ ಇಲಾಖೆಯ ಗಮನಕ್ಕೆ ಬಂದಿದ್ದು ಈಗಾಗಲೇ ಸಂಬಂಧಪಟ್ಟ ಸಿಬ್ಬಂದಿಗೆ ಶೋಕಾಸ್ ನೋಟೀಸ್ ನೀಡಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು ಮಾಹಿತಿ ನೀಡಿದರು.

ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರಾ, ತಹಶೀಲ್ದರ್ ರಶ್ಮಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.



This post first appeared on V4news, please read the originial post: here

Share the post

ಬಂಟ್ವಾಳ ತಾ.ಪಂ. ಸಭೆಯಲ್ಲಿ ಗದ್ದಲ : ಗ್ಯಾಸ್ ವಿತರಿಸುವ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳ ಕಡೆಗಣನೆ ಸದಸ್ಯರ ನಡುವೆ ಮಾತಿನ ಚಕಮಕಿ

×

Subscribe to V4news

Get updates delivered right to your inbox!

Thank you for your subscription

×