Get Even More Visitors To Your Blog, Upgrade To A Business Listing >>

ಇಂಧನ ಬೆಲೆ ಏರಿಕೆ ವಿರೋಧಿಸಿ ಡಿವೈಎಫ್‍ಐ ಉಳ್ಳಾಲ ವಲಯ ಸಮಿತಿಯ ಪ್ರತಿಭಟನೆ

ಕಳೆದ ಹಲವಾರು ದಿನಗಳಿಂದ ನಿರಂತರವಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಏರಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಡಿವೈಎಫ್‍ಐ ಉಳ್ಳಾಲ ವಲಯ ಸಮಿತಿಯ ವತಿಯಿಂದ ಕುತ್ತಾರ್ ಪೆಟ್ರೋಲ್ ಪಂಪ್ ಮುಂಭಾಗ ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್‍ಐ ಉಳ್ಳಾಲ ವಲಯ ಸಮಿತಿಯ ಅಧ್ಯಕ್ಷ ಅಶ್ರಫ್ ಮಂಜ್ರಾಬಾದ್ ಕೆಸಿ ರೋಡು ಜನತೆ ಲಾಕ್‍ಡೌನ್ ನಂತರ ಆರ್ಥಿಕವಾಗಿ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಜನತೆಯ ಜೊತೆ ನಿಲ್ಲಬೇಕಿದ್ದ ಕೇಂದ್ರ ಸರ್ಕಾರ ನಿರಂತರವಾಗಿ ಕಳೆದ 21 ದಿನಗಳಿಂದ ಪೆಟ್ರೋಲ್, ಡೀಸೆಲ್ ದರಗಳನ್ನು ಏರಿಸುವ ಮೂಲಕ ಜನವಿರೋಧಿಯಾಗಿ ವರ್ತಿಸುತ್ತಿದೆ. ಇದು ಸದ್ಯದ ಮಟ್ಟಿಗೆ ಆತಂಕಕಾರಿ ಬೆಳವಣೆಗೆ ಎಂದರು.

ಈ ಸಂದರ್ಭ ಡಿವೈಎಫ್‍ಐ ಜಿಲ್ಲಾ ಮುಖಂಡ ಅಡ್ವಕೇಟ್ ನಿತಿನ್ ಕುತ್ತಾರ್, ಡಿವೈಎಫ್‍ಐ ಜಿಲ್ಲಾ ನಾಯಕರಾದ ಜೀವನ್ ರಾಜ್ ಕುತ್ತಾರ್, ರಫೀಕ್ ಹರೇಕಳ, ಸಿಪಿಐಎಂ ಮುಖಂಡರಾದ ಮಹಾಬಲ ದೆಪ್ಪಲಿಮಾರ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು.



This post first appeared on V4news, please read the originial post: here

Share the post

ಇಂಧನ ಬೆಲೆ ಏರಿಕೆ ವಿರೋಧಿಸಿ ಡಿವೈಎಫ್‍ಐ ಉಳ್ಳಾಲ ವಲಯ ಸಮಿತಿಯ ಪ್ರತಿಭಟನೆ

×

Subscribe to V4news

Get updates delivered right to your inbox!

Thank you for your subscription

×