Get Even More Visitors To Your Blog, Upgrade To A Business Listing >>

ಗೋಮಾಳ ಜಮೀನು ಅಕ್ರಮ ಡಿನೋಟಿಫಿಕೇಷನ್: ಬಿಎಸ್ ವೈ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು

Tags: zwnj

ಬೆಂಗಳೂರು: ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಎಸಿಬಿಯಲ್ಲಿ ದೂರು ದಾಖ ಲಾಗಿದೆ. ಗೋಮಾಳ ಜಮೀ ನನ್ನು ಅಕ್ರಮ ಡಿನೋಟಿಫಿಕೇಷನ್ ಮಾಡಿ, ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಮಾಹಿತಿ ಹಕ್ಕು ಕಾರ್ಯಕರ್ತ ಹನುಮೇಗೌಡ ಅವರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಕ್ಕೆ ದೂರು ಕೊಟ್ಟಿ ದ್ದಾರೆ.

ಬೆಂಗಳೂರು ಉತ್ತರ ತಾಲೂಕಿನ 10 ಎಕರೆ ಗೋಮಾಳದ ಜಮೀನನ್ನು 2011ರಲ್ಲಿ ಅಕ್ರಮವಾಗಿ ಡಿನೋಟಿ ಫಿಕೇಷನ್ ಮಾಡಲಾಗಿದೆ ಎಂಬುದು ಆರೋಪ. ಜಮೀನನ್ನು ಡಿನೋಟಿಫಿ ಕೇಷನ್ ಮಾಡಿ ತಮ್ಮ ಆಪ್ತ ಬಿ.ಜೆ. ಪುಟ್ಟಸ್ವಾಮಿ ಅವರಿಗೆ ಸೇರಿದ ಟ್ರಸ್ಟ್‌ಗೆ ನೀಡಿದ್ದಾರೆ. ಅದಕ್ಕಾಗಿ 6 ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಿ.ಜೆ. ಪುಟ್ಟಸ್ವಾಮಿ ಅವರ ವಿರುದ್ಧವೂ ತನಿಖೆ ನಡೆಸಬೇಕು ಎಂದು ಮನವಿ ಮಾಡ ಲಾಗಿದೆ.

ಕೆಂಪಯ್ಯ ವಿರುದ್ಧ ದೂರು : ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ಸಲಹೆಗಾರ ಮತ್ತು ನಿವೃತ್ತ ಐಪಿ‌ಎಸ್ ಅಧಿಕಾರಿಗೆ ಕೆಂಪಯ್ಯ ಅವರ ವಿರುದ್ಧ ಎಸಿಬಿಗೆ ದೂರು ಸಲ್ಲಿಸಲಾಗಿದೆ. ಕೆಂಪಯ್ಯ ಅವರು ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂದು ದಿನೇಶ್ ಕಲ್ಲಹಳ್ಳಿ ಅವರು ದೂರು ನೀಡಿದ್ದಾರೆ. ಕೆಂಪಯ್ಯ ಅವರು ಕುರುಬ ಸಮುದಾಯಕ್ಕೆ ಸೇರಿದವರು. ಆದರೆ, ತಮ್ಮದು ಕಾಡು ಕುರುಬ ಎಂದು ಸುಳ್ಳು ದಾಖಲೆ ನೀಡಿ ಪರಿಶಿಷ್ಟ ಪಂಗಡದ ಕೋಟಾ ಅಡಿ ಐಪಿ‌ಎಸ್ ನೌಕರಿ ಪಡೆದಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ವರದಿ: ಆರ್.ಎ. ಲೋಹಾನಿ ಮಂಗಳೂರು

The post ಗೋಮಾಳ ಜಮೀನು ಅಕ್ರಮ ಡಿನೋಟಿಫಿಕೇಷನ್: ಬಿಎಸ್ ವೈ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು appeared first on V4News.



This post first appeared on V4news, please read the originial post: here

Share the post

ಗೋಮಾಳ ಜಮೀನು ಅಕ್ರಮ ಡಿನೋಟಿಫಿಕೇಷನ್: ಬಿಎಸ್ ವೈ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು

×

Subscribe to V4news

Get updates delivered right to your inbox!

Thank you for your subscription

×