Get Even More Visitors To Your Blog, Upgrade To A Business Listing >>

ಅಪಾಯಕಾರಿ ಹಕ್ಕಿ ಜ್ವರ:ರಾಜ್ಯದಲ್ಲಿ ಮತ್ತೆ ಸೋಂಕು ಪತ್ತೆ

ಅಪಾಯಕಾರಿ ಹಕ್ಕಿ ಜ್ವರ ರಾಜ್ಯದ ಮೇಲೆ ಮತ್ತೆ ತನ್ನ ಕೆಂಗಣ್ಣು ಬೀರಿದ್ದು, ನಿನ್ನೆಯಷ್ಟೇ ಬೀದರ್ ನ ಕೋಳಿ ಫಾರಂ ಒಂದರಲ್ಲಿ ಸೋಂಕು ಪತ್ತೆಯಾಗಿತ್ತು. ಇದೀಗ ಸೋಂಕು ಪೀಡಿತ  ಸುಮಾರು 1.5 ಲಕ್ಷ ಹಕ್ಕಿಗಳನ್ನು ವೈಜ್ಞಾನಿಕ ಪ್ರಕ್ರಿಯೆ ಮೂಲಕ ಕೊಲ್ಲಲು ನಿರ್ಧರಿಸಲಾಗಿದೆ.

ಇನ್ನು ಬೀದರ್ ನಲ್ಲಿ ಹಕ್ಕಿ ಜ್ವರ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ನಿನ್ನೆ ಸಂಜೆಯಷ್ಟೇ ರಾಜ್ಯ ಪಶುಸಂಗೋಪನಾ ಸಚಿವ ಎ.ಮಂಜು ಅವರು, ತುರ್ತು ಉನ್ನತ ಮಟ್ಟದ ಸಭೆ ನಡೆಸಿ,  ರಾಜ್ಯದಲ್ಲಿ ಕಾಣಿಸಿಕೊಂಡಿರುವ ಹಕ್ಕಿ ಜ್ವರದ ಸೋಂಕು ಇತರೆಡೆಗೆ ಹರಡದಂತೆ ಕೈಗೊಳ್ಳಬೇಕಾಗಿರುವ ಮುನ್ನೆಚ್ಚರಿಕೆಗಳ ಬಗ್ಗೆ ಸಮಾಲೋಚನೆ ನಡೆಸಿದ್ದರು. ಅದರಂತೆ ವೈದ್ಯಾಧಿಕಾರಿಗಳು  ಮತ್ತು ಜಿಲ್ಲಾಧಿಕಾರಿಗಳು ನೀಡಿರುವ ಮಾಹಿತಿ ಮೇರೆಗೆ ಕೋಳಿಗಳು ಸೇರಿದಂತೆ ಸುಮಾರು 1.5 ಲಕ್ಷ ರೋಗ ಪೀಡಿತ ಹಕ್ಕಿಗಳನ್ನು ನಾಶಪಡಿಸಲು ಸೂಚನೆ ನೀಡಿದ್ದಾರೆ.

ರೋಗ ಇತರ ಭಾಗಗಳಿಗೆ ಹರಡುವುದನ್ನು ತಡೆಯಲು ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಸ್ಥಳೀಯ ಜಿಲ್ಲಾಡಳಿತಕ್ಕೆ ಮತ್ತು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು.  ಇದೀಗ ಸೋಂಕು ಕಾಣಿಸಿಕೊಂಡಿರುವ ಸುತ್ತಮುತ್ತಲಿನ ಪ್ರದೇಶದ ಕೋಳಿಗಳನ್ನು ವೈಜ್ಞಾನಿಕ ವಿಧಾನದಲ್ಲಿ ನಾಶ ಪಡಿಸಲು ವೈದ್ಯಾಧಿಕಾರಿಗಳು ಮುಂದಾಗಿದ್ದಾರೆ.

ಅಲ್ಲದೆ ಸೊಂಕು ಪೀಡಿತ ಪ್ರದೇಶದಿಂದ ಸುಮಾರು ೧೦ ಕಿ.ಮೀ. ವ್ಯಾಪ್ತಿಯಲ್ಲಿನ ಕೋಳಿ ಸಾಕಾಣಿಕಾ ಕೇಂದ್ರಗಳು, ಜನ-ಜಾನುವಾರುಗಳ ಬಗ್ಗೆಯೂ ಕೂಡ ಕಟ್ಟೆಚ್ಚರ ವಹಿಸುವಂತೆ ಸಚಿವರು ನಿರ್ದೇಶನ ನೀಡಿದ್ದಾರೆ ಎಂದು ತಿಳಿದುಬಂದಿದೆ. ಇವಿಷ್ಟೇ ಅಲ್ಲದೆ ನೆರೆಯ ತೆಲಂಗಾಣದಿಂದ ಕೋಳಿಗಳನ್ನು ರಾಜ್ಯಕ್ಕೆ ತರುವುದಕ್ಕೆ ನಿರ್ಬಂಧ ಹೇರುವ ಕುರಿತು ಚಿಂತನೆ ನಡೆಸಲಾಗಿದೆ. ಜೊತೆಗೆ ಸೋಂಕು ಪೀಡಿತ ಪ್ರದೇಶದಿಂದ ಯಾವುದೇ ಕೋಳಿಗಳನ್ನು ಹೊರ ತೆಗೆದುಕೊಂಡು ಹೋಗುವುದಕ್ಕೆ ನಿರ್ಬಂಧ ವಿಧಿಸಲಾಗುತ್ತದೆ. ಗಡಿ ಭಾಗದ ಜಿಲ್ಲೆಗಳಲ್ಲೂ ಹಕ್ಕಿ ಜ್ವರದ ಸೋಂಕಿನ ಬಗ್ಗೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ವಹಿಸಲು ಸರ್ಕಾರ ಸೂಚನೆ ನೀಡಲಿದೆ.
ಅಲ್ಲದೆ, ಆರೋಗ್ಯ ಇಲಾಖೆಗೂ ಕೂಡ ಈ ಬಗ್ಗೆ ನಿರ್ದೇಶನ ನೀಡಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ರಾಜ್ಯದ ಇತರೆ ಭಾಗಗಳಲ್ಲೂ ಕೂಡ ಕೋಳಿಗಳನ್ನು ಪರೀಕ್ಷೆಗೆ ಒಳಪಡಿಸಲು ನಿರ್ದೇಶಿಸಲಾಗಿದ್ದು, ಎಲ್ಲೆಡೆ ಕಟ್ಟುನಿಟ್ಟಿನ ಕ್ರಮಕೈಗೊಂಡು ರೋಗ ಹರಡದಂತೆ ತಡೆಯಲು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

The post ಅಪಾಯಕಾರಿ ಹಕ್ಕಿ ಜ್ವರ:ರಾಜ್ಯದಲ್ಲಿ ಮತ್ತೆ ಸೋಂಕು ಪತ್ತೆ appeared first on V4News.



This post first appeared on V4news, please read the originial post: here

Share the post

ಅಪಾಯಕಾರಿ ಹಕ್ಕಿ ಜ್ವರ:ರಾಜ್ಯದಲ್ಲಿ ಮತ್ತೆ ಸೋಂಕು ಪತ್ತೆ

×

Subscribe to V4news

Get updates delivered right to your inbox!

Thank you for your subscription

×