Get Even More Visitors To Your Blog, Upgrade To A Business Listing >>

ಕಳತ್ತೂರು ಕುಶಲ ಶೇಖರ ಶೆಟ್ಟಿ ಚಾರಿಟೇಬಲ್ ಟ್ರಸ್ಟ್: 6 ಲಕ್ಷಕ್ಕೂ ಮಿಕ್ಕಿ ವಿದ್ಯಾರ್ಥಿ ವೇತನ, ಸಮವಸ್ತ್ರ ವಿತರಣೆ

Tags: agravesup

ಕಳತ್ತೂರು ಕುಶಲ ಶೇಖರ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ 6 ಲಕ್ಷ ರೂ. ಮಿಕ್ಕಿ ಅನುದಾನಿತ ಕನ್ನಡ ಮಾಧ್ಯಮ ಶಾಲೆಗಳ 350 ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪ್ರತಿಭಾನ್ವಿತರಾದ 270 ಕ್ಕೂ ಮಿಕ್ಕಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಸುಮಾರು 100 ಕ್ಕೂ ಅಧಿಕ ಅಪ್ಪಟ ಕೃಷಿ ಕೂಲಿ ಕಾರ್ಮಿಕರನ್ನು ಗುರುತಿಸಿ ಗೌರವಿಸಲಿದ್ದು, ಅಂಗವಿಕಲರಿಗೆ ಧನಸಹಾಯ ವಿತರಿಸುವ ಕಾರ್ಯಕ್ರಮವು ಕಳತ್ತೂರಿನ ಅಡಿಟೋರಿಯಂನಲ್ಲಿ ಶನಿವಾರ ಜರಗಲಿದೆ ಎಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಯು.ಎ.ಇ ಇಲ್ಲಿನ ಅರಬ್ ಉಡುಪಿ ಗ್ರೂಪ್ ಆಫ್ ಹೋಟೆಲ್ಸ್ ಅಧ್ಯಕ್ಷ ಶೇಖರ್ ಶೆಟ್ಟಿ ಹೇಳಿದರು.

ಅವರು ಗುರುವಾರ ಕಳತ್ತೂರು ಕುಶಲಶೇಖರ ಶೆಟ್ಟಿ ಇಂಟರ್‌ನ್ಯಾಷನಲ್ ಆಡಿಟೋರಿಯಂನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಮಾಹಿತಿ ನೀಡಿದರು.

4ನೇ ವರ್ಷದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮವು ಹುಟ್ಟೂರಿನ ಬಡಜನರ ಸೇವೆಯೇ ನಿಗದಿತ ಗುರಿಯಾಗಿದ್ದು ವಿದ್ಯೆಗೆ ಪ್ರೋತ್ಸಾಹ ನೀಡುವ ಉದ್ದೇಶವಿರಿಸಿ ಕುತ್ಯಾರು, ಕಳತ್ತೂರು, ಪಾದೂರು, ಪೈಯ್ಯಾರು ಗ್ರಾಮಗಳ ವಿದ್ಯಾರ್ಥಿಗಳಿಗೆ ಹೆಚ್ಚಿನ ಸವಲತ್ತು ನೀಡಲಾಗುತ್ತಿದೆ. ಸಮಾಜ ಸೇವೆಯಲ್ಲಿ ಗುರುತಿಸಿಕೊಂಡ ರವೀಂದ್ರನಾಥ ಜಿ. ಶೆಟ್ಟಿ ಹಾಗೂ ಪ್ರವೀಣ್ ಕುಮಾರ್ ಗುರ್ಮೆ ಅವರನ್ನು ಸನ್ಮಾನಿಸಲಾಗುವುದೆಂದರು.

ಈ ಸಂದರ್ಭ ಸಚಿವ ವಿನಯ ಕುಮಾರ್ ಸೊರಕೆ, ಸಂಸದೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮುಖ್ಯ ಅತಿಥಿಗಳಾಗಿದ್ದು, ಮಾಜಿ ಶಾಸಕ ಲಾಲಾಜಿ ಮೆಂಡನ್, ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ, ಜಿ.ಪಂ. ಸದಸ್ಯೆ ಶಿಲ್ಪಾ  ತಾ.ಪಂ. ಸದಸ್ಯೆ ಶಶಿಪ್ರಭಾ ಶೆಟ್ಟಿ, ಕಾಪು ಬಂಟರ ಸಂಘದ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಧೀರಜ್ ಶೆಟ್ಟಿ, ಸಂದೀಪ್ ರಾವ್, ಉಮೇಶ್ ಶೆಟ್ಟಿ, ಕುತ್ಯಾರು ನವೀನ್ ಶೆಟ್ಟಿ, ನಿತ್ಯಾನಂದ ಶೆಟ್ಟಿ, ಸೌಮ್ಯರಾಕೇಶ್ ಉಪಸ್ಥಿತರಿರುವರು.

ಸುದ್ದಿಗೋಷ್ಠಿಯಲ್ಲಿ ಕುಶಲಶೇಖರ ಶೆಟ್ಟಿ, ಪ್ರವೀಣ್ ಕುಮಾರ್ ಗುರ್ಮೆ, ಅಮರನಾಥ ಶೆಟ್ಟಿ, ರಂಜಿತ್ ಕುಮಾರ್ ಉಪಸ್ಥಿತರಿದ್ದರು.

ವರದಿ-ಸುರೇಶ್ ಎರ್ಮಾಳ್



This post first appeared on V4news, please read the originial post: here

Share the post

ಕಳತ್ತೂರು ಕುಶಲ ಶೇಖರ ಶೆಟ್ಟಿ ಚಾರಿಟೇಬಲ್ ಟ್ರಸ್ಟ್: 6 ಲಕ್ಷಕ್ಕೂ ಮಿಕ್ಕಿ ವಿದ್ಯಾರ್ಥಿ ವೇತನ, ಸಮವಸ್ತ್ರ ವಿತರಣೆ

×

Subscribe to V4news

Get updates delivered right to your inbox!

Thank you for your subscription

×