Get Even More Visitors To Your Blog, Upgrade To A Business Listing >>

ಮಡಿಕೇರಿಯಲ್ಲಿ ಡಿವೈಎಸ್‌ಪಿ ಆತ್ಮಹತ್ಯೆ ಪ್ರಕರಣ ಸಿಬಿಐ ತನಿಖೆಗೆ ಆಗ್ರಹಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಬೈಂದೂರಿನಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನಾ ಮೆರವಣಿಗೆ

c05cd01e-1f6c-428d-9ac5-243f6022d362 (1) copy

ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಆಗ್ರಹಿಸಿ ರಾಜ್ಯಾದ್ಯಂತ ವಿವಿಧ ಸಂಘಟನೆಗಳು, ವಿದ್ಯಾರ್ಥಿ ಪರಿಷತ್ ಗಳು ಈಗಾಗಲೇ ಬೃಹತ್ ಪ್ರತಿಭಟನೆ ನಡೆಸಿದ್ದು, ಸೋಮವಾರ ಬೈಂದೂರಿನಲ್ಲಿ ಎಬಿವಿಪಿ ಸಂಘಟನೆಯ ನೇತೃತ್ವದಲ್ಲಿ ಬೈಂದೂರು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಬೃಹತ್ ಪ್ರತಿಭಟನೆ ನಡೆಸಿದರು.c05cd01e-1f6c-428d-9ac5-243f6022d362 (1) copy

c684a101-f009-4d11-80a3-d4035c49800f copyಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಹೆಸರು ಕೇಳಿ ಬಂದಿರುವ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಡೆತ್‌ನೋಟ್‌ನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳಾದ ಎ.ಎಂ. ಪ್ರಸಾದ್ ಹಾಗೂ ಪ್ರಣಬ್ ಮೊಹಂತಿ ಹೆಸರು ಉಲ್ಲೇಖವಾಗಿದೆ. ದಕ್ಷ ಅಧಿಕಾರಿಗಳು ಕೆಲಸ ಮಾಡದ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ ಎಂದು ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನಾಕಾರರು ಕಿಡಿಕಾರಿದರು. ನ್ಯಾಯಾಂಗ ತನಿಖೆಯಿಂದ ಸರಿಯಾದ ಫಲಿತಾಂಶ ಬರಲು ಸಾಧ್ಯವಿಲ್ಲ. ಅದರಲ್ಲಿ ನ್ಯಾಯಾಲಯದಲ್ಲಿ ನಡೆಯುವ ವಿಚಾರಣೆಯಂತೆ ವಿಚಾರಣೆ ಆಗುವುದಿಲ್ಲ. ಸಿಐಡಿಯಿಂದಲೂ ಸತ್ಯಾಂಶ ಹೊರಬರುವುದಿಲ್ಲ. ಆದ ಕಾರಣ ಸಿಬಿಐ ತನಿಖೆಯೇ ಸೂಕ್ತ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ಕಾಲೇಜಿನಿಂದ ಹೊರಟ ಪ್ರತಿಭಟನಾ ಮೆರವಣಿಗೆ ಬೈಂದೂರು ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿ ಬೈಂದೂರು ತಹಶೀಲ್ದಾರ್ ಕಛೇರಿವರೆಗೆ ಬಂದು ವಿಶೇಷ ತಹಶೀಲ್ದಾರರಾದ ಕಿರಣ್ ಗೌರಯ್ಯ ಅವರಿಗೆ ಮನವಿ ಸಲ್ಲಿಸಿದರು.
ವರದಿ: ಸುಶಾಂತ್ ಬೈಂದೂರುThis post first appeared on V4news, please read the originial post: here

Share the post

ಮಡಿಕೇರಿಯಲ್ಲಿ ಡಿವೈಎಸ್‌ಪಿ ಆತ್ಮಹತ್ಯೆ ಪ್ರಕರಣ ಸಿಬಿಐ ತನಿಖೆಗೆ ಆಗ್ರಹಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಬೈಂದೂರಿನಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನಾ ಮೆರವಣಿಗೆ

×

Subscribe to V4news

Get updates delivered right to your inbox!

Thank you for your subscription

×